ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ರಾಣೆಬೆನ್ನೂರು ನಿವಾಸ ಶಂಭುಲಿಂಗ ಮಡಿವಾಳ (37) ಬಂಧಿತ‌ ವ್ಯಕ್ತಿ. ಬುಧವಾರ ಹಳೆಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶಂಭುಲಿಂಗನನ್ನು ಬಂಧಿಸಿದ್ದಾರೆ. ಈತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ […]