ಉಡುಪಿ:ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್

ಉಡುಪಿ: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ […]