ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಜನರಿಗೆ ಸೇವೆ ಸಲ್ಲಿಸುವ ಅವಕಾಶ ಪ್ರತಿಯೊಬ್ಬರಿಗೂ ದೊರೆಯುವುದಿಲ್ಲ. ಸರ್ಕಾರಿ ಅಧಿಕಾರಿಗಳು ತಮಗೆ ದೊರೆತಿರುವ ಅವಕಾಶವನ್ನು ಬಳಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರತಿಯೊಬ್ಬರ ಅಭಿವೃದ್ಧಿಯಲ್ಲಿ ಶ್ರಮಿಸಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಇಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಪು ತಾಲೂಕು ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನಸ್ಪಂದನ […]