ಜನಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ, ಜುಲೈ 12: ಜನಸಾಮಾನ್ಯರು ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಕಾಲಮಿತಿಯೊಳಗೆ ನಿಯಮಾನುಸಾರ ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.ಅವರು ಇಂದು ಕಾರ್ಕಳದ ಪೆರ್ವಾಜೆ ಶ್ರೀನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕುಪಂಚಾಯತ್ ಹಾಗೂ ಪುರಸಭೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡುತ್ತಿದ್ದರು. ಸಾರ್ವಜನಿಕರಿಂದ ಸ್ಪೀಕೃತಗೊಂಡ ಅರ್ಜಿಯನ್ನು ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಅಲ್ಲದೇ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು […]