ವಿದ್ಯಾರ್ಥಿಗಳ, ಶಿಕ್ಷಕರ ಪರಿಶ್ರಮಕ್ಕೆ ಸಿಕ್ಕ ಫಲ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಜ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮಕ್ಕೆ ಫಲ ಲಭಿಸಿದೆ. ವರ್ಷಪೂರ್ತಿ ಓದಿ, ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ಮಟ್ಟದಲ್ಲಿ ಪ್ರಾಂಶುಪಾಲರ ಹಲವಾರು ಸಭೆಗಳನ್ನು ಮಾಡಿದ್ದೆವು. ಶೈಕ್ಷಣಿಕ ವರ್ಷದ ಆರಂಭದಿಂದ ಪ್ರಥಮ ಸ್ಥಾನದ ಗುರಿಯನ್ನು […]
ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಟಾಪರ್ ಆದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿವರು

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ. ಎಸ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ […]