ಕಾನೂನು ಬದಲಾದರೂ, ಹಳ್ಳಿಯಲ್ಲಿ ಹುಟ್ಟಿದ ಗಾದೆಗಳು ಸುಳ್ಳಾಗದು – ಪುರುಷೋತ್ತಮ್

ಉಡುಪಿ: ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಸಿಜೆಎಮ್ ಎಮ್. ಪುರುಷೋತ್ತಮ್ ಅಭಿಪ್ರಾಯಪಟ್ಟಿದ್ದಾರೆ. ಅವರು ಶುಕ್ರವಾರ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ” ಪೋಕ್ಸೊ ಕಾಯ್ದೆ”ಯ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ಯಾವುದೇ ಪಿಹೆಚ್‌ಡಿ ಪಡೆಯದಿದ್ದರೂ, ಜೀವನದ ಅನುಭವದ […]