ಪುತ್ತಿಗೆ ಮಠಾಧೀಶರ ಆಶೀರ್ವಾದ ಪಡೆದ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಕರ್ನಾಟಕ ಸರಕಾರದ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಗೀತಾ ಮಂದಿರದಲ್ಲಿ ಪಡೆದುಕೊಂಡರು. ಮಠದ ಶ್ರೀ ರಮೇಶ್ ಭಟ್, ಶ್ರೀ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಹಾಗೂ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಉಪಸ್ಥಿತರಿದ್ದರು.