ಉಡುಪಿ: ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪುತ್ತಿಗೆ ಶ್ರೀ

ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಅದಮಾರು ಹಿರಿಯ ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಹಾಗೂ ಭಂಡಾರಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು. ಪುತ್ತಿಗೆ ಕಿರಿಯ ಸುಶ್ರಿಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮತ್ತು ಅನೇಕ ವಿದ್ವಾಂಸರ ಹಾಗೂ ಶ್ರೀಪುತ್ತಿಗೆ ವಿದ್ಯಾಪೀಠದ ಅನೇಕ ಹಳೆವಿದ್ಯಾರ್ಥಿಗಳ ಸಮ್ಮುಖದಲ್ಲಿ ಶ್ರೀಕೃಷ್ಣಮಠದಲ್ಲಿ ಜರುಗಿದ ಈ ಸಮಾರಂಭದಲ್ಲಿ ಪರ್ಯಾಯ ಮಠದ ವತಿಯಿಂದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನಾಚಾರ್ಯ ಅವರು […]