ಉಡುಪಿ: ರೈಲ್ವೆ ಸೇತುವೆ ಕಾಮಗಾರಿ ವೇಳೆ ತಲೆಕೆಳಗಾಗಿ ಬಿದ್ದ ಕ್ರೈನ್; ತಪ್ಪಿದ ಭಾರಿ ದುರಂತ.!

ಉಡುಪಿ: ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ. ಎಡಮಗ್ಗಲಿನ ಎತ್ತರದ ರಸ್ತೆಯಿಂದ ಬಲ ಮಗ್ಗುಲಿನಲ್ಲಿರುವ ತಗ್ಗು ರಸ್ತೆಗೆ, ಈ ಕ್ರೈನ್ ಬಿದ್ದಿದ್ದರೆ ಭಾರಿ ಅಪಾಯ ಸಂಭವಿಸುತ್ತಿತ್ತು. ಹತ್ತಾರು ವಾಹನಗಳು ಸಂಚರಿಸುವ ರಸ್ತೆಯ ಪಕ್ಕದಲ್ಲಿ ಕಂಡು ಬಂದ […]