ರೈಲ್ವೆ ಖಾಸಗೀಕರಣ ವಿರೋಧಿಸಿ ಉಡುಪಿಯಲ್ಲಿ ನಡೀತು ಪ್ರತಿಭಟನೆ: ರೈಲ್ವೆ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

ಉಡುಪಿ: ರೈಲ್ವೆ ಖಾಸಗೀಕರಣವನ್ನು ವಿರೋಧಿಸಿ ಸಿಐಟಿಯು ಉಡುಪಿ ತಾಲ್ಲೂಕು ಸಮಿತಿಯ ವತಿಯಿಂದ ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು ದೇಶದ ಸಾರ್ವಜನಿಕ ಸಂಪತ್ತುಗಳನ್ನು ಸದ್ದಿಲ್ಲದೆ ಖಾಸಗಿ ಕಂಪೆನಿಗಳಿಗೆ ಹಾಗೂ ವಿದೇಶಿ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡುವ ಕೆಲಸಕ್ಕೆ ಕೈಹಾಕಿದೆ. ಈಗಾಗಲೇ ಕಲ್ಲಿದ್ದಲು ಗಣಿ, ರಕ್ಷಣಾ ವಲಯ, ವಿದ್ಯುಚ್ಛಕ್ತಿ ನಿಗಮ, ಎಪಿಎಂಸಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸಿದ್ದಾರೆ. ಇದೀಗ ದೇಶದ ಅತೀ ದೊಡ್ಡ ಸಾರಿಗೆ ಸಂಪರ್ಕವಾದ ರೈಲ್ವೆಯನ್ನು ಖಾಸಗೀಕರಣಗೊಳಿಸಲು ಹೊರಟಿದೆ. ಅದರ ಭಾಗವಾಗಿ ದೇಶದ 109 ರೈಲ್ವೆ […]