ಉಡುಪಿ:ಮುಂಗಾರು ಮಳೆಯಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳ ಕಾಮಗಾರಿಗಳನ್ನು […]