ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ.!

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. […]