ಉಡುಪಿ: ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ

ಉಡುಪಿ, ಜುಲೈ 04: ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು.ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು […]