ಉಡುಪಿ: ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ.

ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು ಬಂದರೆ ಅವುಗಳನ್ನು […]