ಉಡುಪಿ:ಮುಂಬರುವ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಗಳಿಗೆ ತಕ್ಷಣವೇ ಸ್ಪಂದಿಸಲು ಸನ್ನದ್ಧರಾಗಿರಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು […]