ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಮಿಕ ರೋಗಗಳ ಕುರಿತು ಮುಂಜಾಗ್ರತಾ ಸಭೆ

ಉಡುಪಿ: ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ. ಮಲೇರಿಯಾ, ಫೈಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯ ಹಾಗೂ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆಯು ಇತ್ತೀಚಿಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸಾಂಕ್ರಮಿಕ ರೋಗಗಳು ಹರಡುವ ಸಂಭವವಿದ್ದು, […]