ರಾಜೀವ ನಗರದಲ್ಲಿ ಹನಿ ನೀರಿಗೂ ಹಾಹಾಕಾರ

ಉಡುಪಿ: ಮೂರು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ “80 ಬಡಗಬೆಟ್ಟು ಗ್ರಾಮ ಪಂಚಾಯತ್” ವ್ಯಾಪ್ತಿಯ ರಾಜೀವನಗರದಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಪಂಚಾಯತ್ ನ ಅಸಮರ್ಪಕ ನಿರ್ವಹಣೆಯಿಂದ ರಾಜೀವನಗರ ನಿವಾಸಿಗಳು ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ರಾಜೀವನಗರದ ಎತ್ತರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನೀರು ಬರುತ್ತಿಲ್ಲ. ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಪ್ರತಿದಿನ ಕುಡಿಯಲು ನೀರಿಗಾಗಿ ಅಲೆದಾಡುವ ಸ್ಥಿತಿ ಉದ್ಭವಿಸಿದೆ. ನೀರಿನ ಮೂಲಕ್ಕೆ ಯಾವುದೇ ತೊಂದರೆ ಇಲ್ಲದಿದ್ದರೂ ನಿರ್ವಹಣೆಯ ಕೊರತೆಯಿಂದ […]