ಉಡುಪಿ: ರಕ್ಷಿತಾ ಅನುಮಾನಾಸ್ಪದ ಸಾವು ಪ್ರಕರಣ; ಪ್ರಿಯಕರ ಪ್ರಶಾಂತ್ ಮೂರು ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ವಿದ್ಯಾರ್ಥಿನಿ ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೊಗವೀರನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ರಕ್ಷಿತಾ ನಾಯಕ್ ಗೆಳೆಯ ಪ್ರಶಾಂತ್ ಮೊಗವೀರನನ್ನು ಉಡುಪಿ ನಗರ ಠಾಣಾ ಪೊಲೀಸರು ಕರೆಸಿ ವಿಚಾರಣೆ ನಡೆಸಿ ಕಳುಹಿಸುತ್ತಿದ್ದರು. ಇದೀಗ ಆರೋಪಿಯನ್ನು ಬಂಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂರು ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಏನಿದು ಘಟನೆ: ಅಕ್ಟೋಬರ್ 24ರಂದು ರಕ್ಷಿತಾಳನ್ನು ಪ್ರಶಾಂತ್ ಪ್ರಜ್ಞಾಹೀನ ಸ್ಥಿತಿಯಲ್ಲಿ ತಂದು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದನು. ಬಳಿಕ […]