ಉಡುಪಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಶ್ಲೀಲ ಚಿತ್ರ ವೈರಲ್ ಪ್ರಕರಣ: ಆರೋಪಿಗೆ 20ವರ್ಷ ಕಠಿಣ ಕಾರಾಗೃಹ ಶಿಕ್ಷೆ.

ಉಡುಪಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೊಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬ್ರಹ್ಮಾವರದ ರಫೀಕ್ (25) ಶಿಕ್ಷೆಗೆ ಗುರಿಯಾದ ಆರೋಪಿ. ರಿಕ್ಷಾ ಚಾಲಕನಾಗಿದ್ದ ರಫೀಕ್ ನೊಂದ ಬಾಲಕಿಯನ್ನು ಕಾಲೇಜಿಗೆ ಕರೆದುಕೊಂಡು ಹೋಗಿ ಬರುತ್ತಿದ್ದು, ನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿ ಸಂದೇಶ ಕಳುಹಿಸಿ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನು. […]