ಉಡುಪಿ ಶ್ರೀಕೃಷ್ಣ ಮಠಕ್ಕೆ ಚಿತ್ರನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ […]