ಖ್ಯಾತ ತೆಂಕುತಿಟ್ಟು ಯಕ್ಷಗಾನ ಭಾಗವತ ದಿನೇಶ ಅಮ್ಮಣ್ಣಾಯ ನಿಧನ.

ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಗರಡಿಯಲ್ಲಿ ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು. ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ […]