ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ :ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾಕ್ರೀಡಾಂಗಣದಲ್ಲಿ […]
ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು […]