ಉಡುಪಿ: ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಯಾವುದಕ್ಕೆ ಅವಕಾಶ.?, ಯಾವುದಕ್ಕಿಲ್ಲ?
ಉಡುಪಿ: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಇದೇ ಮೇ 10ರಿಂದ ದಿನಸಿ, ಹಣ್ಣು , ತರಕಾರಿ, ಮಾಂಸ, ಮೀನು, ಪ್ರಾಣಿಗಳ ಮೇವುಗಳ ಮಾರಾಟಕ್ಕೆ ಬೆಳಿಗ್ಗೆ 6ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅವುಗಳ ಖರೀದಿಸಲು ವಾಹನ ಬಳಕೆಯನ್ನು ನಿಷೇಧಿಸಲಾಗಿದೆ. ಮನೆ ಸಮೀಪದ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿಸಬೇಕು. ಅದು ಬಿಟ್ಟು ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಹೊಟೇಲ್ಗಳಲ್ಲಿ ಬೆಳಿಗ್ಗೆ 6ಗಂಟೆಯಿಂದ ರಾತ್ರಿ 9ಗಂಟೆವರೆಗೆ […]