ಉಡುಪಿ:ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ […]