ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.

ಬಂಟ್ವಾಳ: ತಾಲೂಕಿನ ಕಾರಿಂಜದಲ್ಲಿ ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಎಂದು ಗುರುತಿಸಲಾಗಿದೆ. ಚೇತನ್ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಂತರ ದೇವಾಲಯದ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು ಕೆರೆಗೆ […]