ರಸ್ತೆ ನಿಮಯ ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ‌ ಅಪಘಾತ ತಡೆಗಟ್ಟಲು ಸಾಧ್ಯವಿದೆ

ಉಡುಪಿ: ಜಿಲ್ಲೆಯಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ 250 ಮಂದಿ ಸಾವನ್ನಪ್ಪುತ್ತಿದ್ದಾರೆ. ಸರಾಸರಿ ಒಂದೂವರೆ ದಿನಕ್ಕೆ ಒಬ್ಬರಂತೆ ಅಪಘಾತದಿಂದ ಜೀವ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಜಿಲ್ಲಾ ಎಸ್ಪಿ ಡಾ.ಅರುಣ್ ಕಳವಳ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಪೋಲಿಸ್, ಉಡುಪಿ ಉಪ ವಿಭಾಗದ ವತಿಯಿಂದ ನಗರದ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಆಯೋಜಿಸಿದ ಅಪರಾಧ ತಡೆ ಮಾಸಾಚರಣೆ – 2024 ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು. ವಾಹನ ಚಾಲನೆಯ ವೇಳೆ ಅಗತ್ಯ ಮುಂಜಾಗೃತ ಕ್ರಮಗಳನ್ನು ವಹಿಸಿದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದು ಎಂದರು. […]