ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ: ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಸೋಮವಾರ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೋಟರಿ ಉಡುಪಿ ಮಾದರಿ ಕಾರ್ಯ ಮಾಡುತಿದ್ದು, ಈ ಸಾಲಿನ ಪ್ರಥಮ ದಿನದಂದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು. ರೋಟರಿ ಉಡುಪಿ ಅಧ್ಯಕ್ಷ ರೋ। ಗುರುರಾಜ್ ಭಟ್ ಟಿ ಅಧ್ಯಕ್ಷತೆ ವಹಿಸಿದ್ದರು. […]