ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾ: ಸುನೀತಾ ಡಿಸೋಜ ನೇತೃತ್ವದ ನೂತನ ಸಮಿತಿಯ ಪದಗ್ರಹಣ
ಉಡುಪಿ: ಬಿಜೆಪಿ ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾದ ಪದಗ್ರಹಣ ಕಾರ್ಯಕ್ರಮವು ಭಾನುವಾರ ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್ ಅಧ್ಯಕ್ಷತೆಯಲ್ಲಿ ಹಾಗು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವುದ್ ಅಬೂಬಕರ್ ಮಾರ್ಗದರ್ಶನದಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ ಭಾರತಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು. ನೂತನ ಸಮಿತಿಯ ಪದಗ್ರಹಣ: ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷೆಯಾಗಿ ಸುನೀತಾ ಡಿಸೋಜ ಆಯ್ಕೆ ಮಾಡಲಾಯಿತು. ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ […]