ಉಡುಪಿ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ; ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಾಗಿ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಸೆಪ್ಟೆಂಬರ್ 30 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810 […]