ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್ ಪಾಲ್ ಸುವರ್ಣ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಶಾಲೆಯ ಶಿಕ್ಷಕರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಮನವಿಯ ಮೇರೆಗೆ 2 ಕೊಠಡಿಗಳನ್ನು 20 ಲಕ್ಷ ವೆಚ್ಚದಲ್ಲಿ ಶಾಸಕರ ನಿಧಿ ಹಾಗೂ ದಾನಿಗಳ ಸಹಕಾರದಿಂದ ಶೀಘ್ರದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ […]