ಉಡುಪಿ:ಸಾಲಿಗ್ರಾಮ ಪ.ಪಂಚಾಯತ್ : ಮುಂಗಾರು ಮಳೆ ಆರಂಭ ಹಿನ್ನೆಲೆ, ಸುರಕ್ಷತಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಸೂಚನೆ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಈಗಾಗಲೇ ಪ್ರಾರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿ ಯಲ್ಲಿನ ಆಸ್ತಿ-ಪಾಸ್ತಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಸಾಕಷ್ಟು ಮುಂಜಾಗೃತೆ ವಹಿಸಬೇಕು. ಚರಂಡಿಗಳಿಗೆ ಕಸಕಡ್ಡಿಗಳನ್ನು, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೇ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು. ಗೂಡಂಗಡಿ ಮಾಲೀಕರುಉಪಯೋಗಿಸಿದ ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಲು ಕ್ರಮವಹಿಸಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದಲ್ಲದೇ ಸೊಳ್ಳೆಯಿಂದ ವಿವಿಧ ರೀತಿಯ ಕಾಯಿಲೆಗಳು ಉಂಟಾಗುತ್ತದೆ. ಆರೋಗ್ಯದಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು,ಡ್ರಂಗಳು, […]