ಮೇ 18ರಿಂದ ಉಡುಪಿ ಜಿಲ್ಲೆಯಾದ್ಯಂತ ಸೆಲೂನ್ ಪುನಾರಂಭ: ಜಿಲ್ಲಾಧಿಕಾರಿಯಿಂದ ಷರತ್ತುಬದ್ಧ ಅನುಮತಿ

ಉಡುಪಿ: ಮೇ 18ರಿಂದ ಜಿಲ್ಲೆಯಾದ್ಯಂತ ಎಲ್ಲಾ ಸೆಲೂನ್ (ಕ್ಷೌರಿಕ ಅಂಗಡಿ)ಗಳನ್ನು ತೆರೆಯಲು ಜಿಲ್ಲಾಧಿಕಾರಿ ಷರತ್ತು ಬದ್ಧ ಅನುಮತಿ ನೀಡಿದ್ದಾರೆ ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 53 ದಿನಗಳಿಂದ ಸೆಲೂನ್ ಗಳು ಸ್ಥಗಿತಗೊಂಡಿದ್ದು, ಇದರಿಂದ ಕ್ಷೌರಿಕರು ಯಾವುದೇ ಸಂಪಾದನೆ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳ ನಿಯೋಗವು ಮೇ 13 […]