ಉಡುಪಿ: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡ್ಲಿ ಡ್ಯಾಮ್‌ನಿಂದ ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಸ್ಯಾಂಡ್ ಆ್ಯಪ್‌ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮರಳು ಪಡೆದುಕೊಳ್ಳಲು ಇಚ್ಚಿಸುವವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಅಥವಾ ದೂರವಾಣಿ ಸಂಖ್ಯೆ 0820 2572 333 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.