ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾನುವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು, ಒಣ ಮೀನು ಮಾರಾಟಗಾರರಿಗೆ ಸೂಕ್ತ ಶೆಡ್ ನಿರ್ಮಾಣ, ಅಪಾಯಕಾರಿ ಮರಗಳ ತೆರವು, ಮಾರುಕಟ್ಟೆ ಪರಿಸರದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವ ಸಂತೆ ಮಾರುಕಟ್ಟೆಯಿಂದ […]