ಉಡುಪಿ:ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು […]