ಉಡುಪಿ:ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು: ಪ್ರಭಾಕರ ಪೂಜಾರಿ

ಉಡುಪಿ: ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾರಿದರು ಎಂದು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಅವರು ಇಂದು ನಗರದ ಕಡಿಯಾಳಿಯ ಯು.ಕಮಲಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಜ್ಙರ ವಚನಗಳು ಅರ್ಥಪೂರ್ಣವಾಗಿದ್ದು, ಪ್ರತಿಯೊಬ್ಬರು ಅವರ ವಚನಗಳನ್ನು […]