ಉಡುಪಿ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ.

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಆತನ ಸಮಯ ಪ್ರಜ್ಞೆಯಿಂದ 60 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಪೆರಂಪಳ್ಳಿಯಲ್ಲಿ ಇಂದು ಸಂಜೆ ನಡೆದಿದೆ. ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯ ಬಸ್ 65 ಮಕ್ಕಳನ್ನು ಹತ್ತಿಸಿಕೊಂಡು ಪೆರಂಪಳ್ಳಿಯಾಗಿ ಮಣಿಪಾಲದ ಕಡೆಗೆ ತೆರಳುತ್ತಿತ್ತು. ಪೆರಂಪಳ್ಳಿಗೆ ಬರುತ್ತಿದ್ದಂತೆ ಬಸ್‌ನ ಚಾಲಕ ಆಲ್ವಿನ್ ಡಿಸೋಜಾ (52) ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್‌ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ […]