ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಿ; ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಭೋದನೆಯ ಜೊತೆಗೆ ಶೌಚಾಲಯ ನೈರ್ಮಲ್ಯದ ಹೊಣೆಗಾರಿಕೆಯನ್ನು ವಹಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಶಾಲೆಗಳ ಶೌಚಾಲಯ ಸ್ವಚ್ಚತೆಗೆ ಸ್ಥಳೀಯಾಡಳಿತದ ಮೂಲಕ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ […]