ಉಡುಪಿ: ನದಿಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿ ಮೃತ್ಯು: ಇನ್ನೋರ್ವ ಗಂಭೀರ

ಉಡುಪಿ: ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ(ಆ 28) ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ. ಮೃತಪಟ್ಟ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17). ಭಾನುವಾರ ಅಲೆವೂರಿನ ನೈಲಪಾದೆಯಲ್ಲಿ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ. ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು. ನೀರಿನಲ್ಲಿ ಮುಳುಗಡೆಯಾಗಿದ್ದವರು ಸ್ಥಳೀಯರು ತುರ್ತು […]