ಉಡುಪಿ: ಜಿಲ್ಲೆಯ 16 ಗ್ರಾಮ ಪಂಚಾಯತ್ ಗಳಲ್ಲಿ ಸೀಲ್ ಡೌನ್ ಮುಂದುವರಿಕೆ; ಡಿಸಿ ಜಗದೀಶ್

ಉಡುಪಿ (ಉಡುಪಿ ಎಕ್ಸ್‌ಪ್ರೆಸ್‌): ಕೋವಿಡ್ ನಿಯಂತ್ರಣಕ್ಕೆ ಸೀಲ್ ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್‌ಗಳನ್ನು ನಾಳೆ (ಜೂನ್ 9) ಬೆಳಿಗ್ಗೆ 11ರಿಂದ ಜೂನ್ 14ರ ವರೆಗೆ ಸೀಲ್ ಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಪ್ರಸಕ್ತ 50ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, […]