ಉಡುಪಿ: ನೌಕಾ ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ; ಮಲ್ಪೆಯಲ್ಲಿ ಇಬ್ಬರ ಬಂಧನ

ಉಡುಪಿ: ಭಾರತೀಯ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ (37) ಬಂಧಿತ ಆರೋಪಿಗಳು. ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಸಂಸ್ಥೆಗೆ ಸುಷ್ಮಾ ಮರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ಈ ಇಬ್ಬರು ಕೆಲಸ ಮಾಡುತ್ತಿದ್ದರು. ರೋಹಿತ್ ಇನ್ಸುಲೇಟರ್ ಆಗಿ ಈ […]