ಉಡುಪಿ:ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ […]