ಉಡುಪಿ:ಸಮಾಜದ ಮಾರ್ಗದರ್ಶಕರಾದ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಹಿರಿಯ ನಾಗರಿಕರನ್ನು ಗೌರವಿಸುವ ಜೊತೆಗೆ ಅವರ ಬದುಕಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡುವ ನಿಟ್ಟಿನಲ್ಲಿ ಸಮಾಜವೂ ಮುಂದಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ […]