ಉಡುಪಿ: ಪ್ರತ್ಯೇಕ ಪ್ರಕರಣ – ನಾಲ್ವರು ಆತ್ಮಹತ್ಯೆ

ಹಿರಿಯಡ್ಕ: ಅನಾರೋಗ್ಯ ಹಾಗೂ ಕುಡಿತದ ಚಿಂತೆಯಿಂದ ಜು.30ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪೆರ್ಡೂರಿನ ರಾಮ(59) ಎಂಬವರು ಆ.3ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಲಕ್ಷ್ಮಣ(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.3ರಂದು ಬೆಳಗ್ಗೆ ಮನೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]