ಉಡುಪಿ: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಶಿಕ್ಷೆ
ಉಡುಪಿ: ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ತೀರ್ಪು ನೀಡಿದ್ದಾರೆ. ವೆಂಕಟೇಶ (30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು. ಘಟನೆ ವಿವರ: ಕಾರ್ಕಳ ಗ್ರಾಮಾಂತರ […]