ಶಿವಪಾಡಿ ದೇವಸ್ಥಾನದಲ್ಲಿ ಶಿವಪಾಡಿ ವೈಭವಕ್ಕೆ ಅದ್ಧೂರಿ ಚಾಲನೆ

ಉಡುಪಿ: ಯುವಜನತೆ ಕೃಷಿಯಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಮಕ್ಕಳಲ್ಲಿ ಕೃಷಿ ಆಸಕ್ತಿ ಬೆಳೆಸುವುದು ಅಗತ್ಯ. ಶಿವಪಾಡಿ ವೈಭವ ಮೂಲಕ ಆರೋಗ್ಯ, ಕೃಷಿ, ಮನೋರಂಜನ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ ಎಂದು ಧರ್ಮಸ್ಥಳದ ಧಮಾರ್ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶಿವರಾತ್ರಿಯ ಅಂಗವಾಗಿ ದೇವಳದ ಅಭಿವೃದ್ಧಿ ಟ್ರಸ್ಟ್ ಹಾಗು ಶಿವಪಾಡಿ ವೈಭವ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಿರುವ ಐದು ದಿನಗಳ ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ ಮೇಳ ಸಂಯುಕ್ತ ಕಾರ್ಯಕ್ರಮ […]