ಬಡ ಮಕ್ಕಳ ಚಿಕಿತ್ಸೆಗಾಗಿ ರವಿ ಕಟಪಾಡಿ ಅವರಿಂದ ಅಷ್ಟಮಿ ವೇಷ

ಉಡುಪಿ: ಪ್ರತಿವರ್ಷದಂತೆ ಈ ಬಾರಿಯು ರವಿ ಕಟಪಾಡಿ ಅವರು ಶ್ರೀಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ರೀತಿಯ ವೇಷ ಧರಿಸಿ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಬಡ ಅನಾರೋಗ್ಯ ಪೀಡಿತ ಮಕ್ಕಳಿಗೆ ನೀಡಲು ಉದ್ದೇಶಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಂಗ್ರಹಿಸಿದ ಒಟ್ಟು 35ಲಕ್ಷ ರೂ. ಹಣವನ್ನು 29 ಬಡ ಮಕ್ಕಳ ಚಿಕಿತ್ಸೆಗೆ ನೀಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡ ಆ ಕಾರ್ಯಕ್ಕೆ ಮುಂದಾಗಿದೆ ಎಂದು ಬುಧವಾರ ಮಹೇಶ್ ಶೆಣೈ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. […]