ಸಿದ್ದಾಪುರದಲ್ಲಿ 8ನೇ ವರ್ಷದ ಮಕ್ಕಳ ಯಕ್ಷಗಾನ ಪ್ರದರ್ಶನ, ಗುರುವಂದನೆ

ಉಡುಪಿ: ಯಕ್ಷಗಾನವನ್ನು ಮಕ್ಕಳು ಕಲಿತರೆ ಅವರ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತದೆ ಎಂಬ ಆತಂಕವನ್ನು ಹೆತ್ತವರು ಬಿಡಬೇಕು. ಯಕ್ಷಗಾನವನ್ನು ಕಲಿತ ಮಕ್ಕಳು ಕಲಿಕೆಯಲ್ಲೂ ಅತೀ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದಾರೆ ಎಂಬುದನ್ನು ಮನಗಾಣಬೇಕು. ಯಕ್ಷಗಾನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಸಿದ್ಧಾಪುರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಇವರ ಆಶ್ರಯದಲ್ಲಿ ಕರ್ನಾಟಕ ಯಕ್ಸಗಾನ ಅಕಾಡೆಮಿ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಂಡ […]