ಉಡುಪಿ: ಕ್ಷುಲ್ಲಕ ರಾಜಕಾರಣ ಮಾಡಿಕೊಂಡು ಕಾಲಹರಣ ಮಾಡಬೇಡಿ: ಶಾಸಕರಿಗೆ ಎಚ್ಚರಿಸಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್

ಉಡುಪಿ: ಕುಂದಾಪುರದ ಪ್ರಾಂಶುಪಾಲರ ಪ್ರಶಸ್ತಿ ತಡೆ ಕುರಿತಾಗಿ ಅಸಾಂವಿಧಾನಿಕ, ಅನಾಗರಿಕ ರೀತಿಯಲ್ಲಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಾಗಿರುವುದರ ಬಗ್ಗೆ ಮೊದಲು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ. ಜ್ಞಾನದ ಬೆಳಕನ್ನು ನೀಡಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ. ಶಿಕ್ಷಕರ ಮೇಲೆ ಗೌರವದ ನೆಪ ಇಟ್ಟುಕೊಂಡು ಕಾನೂನಿಗೆ ವಿರುದ್ಧವಾಗಿ ಅನಾಗರಿಕ ರೀತಿಯಲ್ಲಿ ತಮ್ಮವರು ಪ್ರತಿಭಟನ ನಡೆಯುವಾಗ ಕಾನೂನು ರೂಪಿಸುವ ರಾಜ್ಯ […]