ಡಿ. 3 ಮತ್ತು 4 ರಂದು ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಕುರಿತು ವಿಚಾರ ಸಂಕಿರಣ

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರ್ಪಡಿಸಿರುವ ಜಿಲ್ಲೆಯು ರಚನೆಗೊಂಡು 25 ವರ್ಷಗಳ ಸಾರ್ಥಕತೆಯ ಸಾಧನೆಯನ್ನು ನೆನಪಿಸಿಕೊಂಡು ಮುಂದಿನ 25 ವರ್ಷಗಳಲ್ಲಿ ಸಾಧಿಸಬೇಕಾಗಿರುವ ಹೊಸ ಯೋಜನೆಗಳ ರೂಪುರೇಷೆಯನ್ನು ಕೈಗೊಂಡು ಕಾರ್ಯಗತಗೊಳಿಸಲು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಡಿಸೆಂಬರ್ 3 ಮತ್ತು 4 ರಂದು ಉಡುಪಿ ಜಿಲ್ಲೆಯಲ್ಲಿ ದಿಕ್ಸೂಚಿಯಾಗಿ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಎಂಬ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಈ […]

ಬೈಂದೂರು: ಉಡುಪಿ ರಜತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ತಾಲೂಕು ಆಡಳಿತ ಬೈಂದೂರು ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 25 ರಂದು ಬೆಳಗ್ಗೆ 11 ಗಂಟೆಗೆ ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಉಡುಪಿ ಜಿಲ್ಲೆಯ ಅಭಿವೃದ್ದಿಗೆ ಸಹಾಯ ಮಾಡಲು ಸದಾ ಸಿದ್ದ: ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್

ಉಡುಪಿ: ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ತಾನು ಕಟಿಬದ್ದನಾಗಿದ್ದು, ರಾಜ್ಯ ಅಥವಾ ಕೇಂದ್ರ ಮಟ್ಟದಲ್ಲಿ ಜಿಲ್ಲೆಯ ಅಭಿವೃದ್ದಿಗೆ ಬೇಕಾಗಿರುವ ಎಲ್ಲಾ ರೀತಿಯ ಸಹಾಯ ಮಾಡಲು ಸದಾ ಸಿದ್ದನಾಗಿದ್ದೇನೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹೇಳಿದರು. ಅವರು ಗುರುವಾರದಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ರಜತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿಗೆ ಎರಡನೆ ಬಾರಿ ಬಂದಿರುತ್ತೇನೆ. ದೇವತೆಗಳ ಭೂಮಿಯಾದ ಉಡುಪಿಗೆ ಭೇಟಿ ನೀಡಿದ ಮೇಲೆ ಮನಸ್ಸು ಪ್ರಸನ್ನವಾಗುತ್ತದೆ. 13 ನೇ ಶತಮಾನಕ್ಕೂ ಹಿಂದಿನ ದೇವಸ್ಥಾನಗಳು ಇಲ್ಲಿವೆ. […]

25 ನೇ ರಜತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ

ಉಡುಪಿ: ಜಿಲ್ಲೆಯ 25 ನೇ ರಜತ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಮೆರವಣಿಗೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, […]

ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ಅಗ್ನಿಪಥ್ ದೌಡ್ ಮ್ಯಾರಥಾನ್ ಗೆ ಚಾಲನೆ

ನಿಟ್ಟೆ: ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಿಸುವ ಹಾಗೂ ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಉಡುಪಿಯ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆ. 24 ಮತ್ತು 25 ರಂದು ಆಯೋಜಿಸಲಾಗಿರುವ 75 ಕಿ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಗೆ ಆ.24 ರಂದು ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ಈ ತಂಡವು ನಿಟ್ಟೆ ವಿದ್ಯಾಸಂಸ್ಥೆಯ […]